ವಿದ್ಯಾರ್ಥಿಗಳ ಅದ್ಭುತ ಸಾಧನೆ

2018ನೇ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಪುತ್ತೂರು ಇಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಉತ್ತಮ ಫಲಿತಾಂಶ ದೊರೆತಿರುತ್ತದೆ. ಪರೀಕ್ಷೆಗೆ 612 ವಿದ್ಯಾರ್ಥಿಗಳು ಹಾಜರಾಗಿದ್ದು ಕಾಲೇಜಿಗೆ 90.00% ಫಲಿತಾಂಶ ದೊರೆತಿದೆ.

ವಿಜ್ಞಾನ ವಿಭಾಗದಲ್ಲಿ ಕೃತಿ ಎ.ಟಿ.600 ಅಂಕಗಳಿಗೆ 584 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ರೆನಿಟಾ ಮೆಲ್ರಿಯಾ ಲೋಬೊ 600ಅಂಕಗಳಿಗೆ 579 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಕಲಾ ವಿಭಾಗದಲ್ಲಿ ಪುನೀತ್ ಕುಮಾರ್ ಟಿ. 600 ಅಂಕಗಳಿಗೆ 505 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಒಟ್ಟು 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ೩೧೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.