ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 2018-19ರ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿನಿಯರಾದ ಶ್ರೀದೇವಿ ಕೆ ಹಾಗೂ ಲಹರಿ ಆಚಾರ್ಯರವರು ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಕಾಲೇಜ್‍ನ ದ್ವಿತೀಯ ವಾಣಿಜ್ಯ ವಿಭಾಗದ ಶ್ರೀದೇವಿ ಕೆರವರು ಆಶುಭಾಷಣ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಲಹರಿ ಎಸ್.ಆಚಾರ್ಯ ಜಾನಪದ ಗೀತೆಯಲ್ಲಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಇವರೀರ್ವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಮೈಸೂರು ವೀಭಾಗವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜ್‍ನ ಪ್ರಾಂಶುಪಾಲ ವಂ|ವಿಜಯ್ ಲೋಬೋ ಹಾಗೂ ಪ್ರದರ್ಶನ ವಿಭಾಗದ ಸಂಯೋಜಕಿ ಉಪನ್ಯಾಸಕಿ ಸುಮನಾ ಪ್ರಶಾಂತ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.