ರಾಜ್ಯಮಟ್ಟದ ಈಜು ಸ್ಪರ್ಧೆ-2018

ರಾಜ್ಯಮಟ್ಟದ ಈಜು ಸ್ಪರ್ಧೆ-2018

Tuesday, December 11th, 2018

ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಈಜು ಸ್ಪರ್ಧೆ-2018 ಇದರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ತ್ರಿಶೂಲ್ ಹಾಗೂ ಸಿಂಚನಾ ಡಿ.ಗೌಡರವರು ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ.

Read More

ರಾಜ್ಯಮಟ್ಟದ ಅಥ್ಲೆಟಿಕ್ಸ್ ಪೋಲ್‍ವಾಲ್ಟ್

ರಾಜ್ಯಮಟ್ಟದ ಅಥ್ಲೆಟಿಕ್ಸ್ ಪೋಲ್‍ವಾಲ್ಟ್

Friday, December 7th, 2018

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಭವಿತ್ ಕುಮಾರ್‍ರವರು 3.80ಮೀ. ಎತ್ತರಕ್ಕೆ ಜಿಗಿದು ಚಿನ್ನದ ಪದಕ ಹಾಗೂ ಕೂಟ ದಾಖಲೆಯೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Read More

ರಾಜ್ಯ ಮಟ್ಟದ ಮುಕ್ತ ಕರಾಟೆ ಛಾಂಪಿಯನ್ ಶಿಪ್ 2018 ಸ್ಪರ್ಧೆ

ರಾಜ್ಯ ಮಟ್ಟದ ಮುಕ್ತ ಕರಾಟೆ ಛಾಂಪಿಯನ್ ಶಿಪ್ 2018 ಸ್ಪರ್ಧೆ

Friday, December 7th, 2018

ಇಂಪ್ಯಾಕ್ಟ್ ಆರ್ಟ್ ಆಂಡ್ ಸ್ಪೋರ್ಟ್ಸ್ ಕರಾಟೆ ಕ್ಲಬ್ ಶಿಟೋರಿಯೋ ಕರಾಟೆ ಡೋ ಹಾಗೂ ಜೆಸಿಐ ಸುಳ್ಯ ಪಯಸ್ವಿನಿ ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ಮುಕ್ತ ಕರಾಟೆ ಛಾಂಪಿಯನ್ ಶಿಪ್ 2018 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಯನಾ ಇವರು ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಪಡೆಯುವ ಮೂಲಕ ವಿಶಿಷ್ಟ ಸಾಧನೆಯನ್ನು ಗೈದಿದ್ದಾರೆ.

Read More

ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

Monday, December 3rd, 2018

ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 2018-19ರ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿನಿಯರಾದ ಶ್ರೀದೇವಿ ಕೆ ಹಾಗೂ ಲಹರಿ ಆಚಾರ್ಯರವರು ಬಹುಮಾನವನ್ನು ಪಡೆದುಕೊಂಡಿದ್ದಾರೆ.

Read More

ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ-2018

ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ-2018

Friday, November 30th, 2018

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳ ಸ್ಪರ್ಧೆ-2018 ಇದರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿಗಳು ಸಂಘಟಕೆರು ಸಂಘಟಿಸಿದ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟಾ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟಾ

Friday, November 30th, 2018

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟಾದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಕೊರಳಿಗೇರಿಸುವ ಮೂಲಕ ಸಾಧನೆಯನ್ನು ಮಾಡಿರುತ್ತಾರೆ.

Read More

ಕಾನೂನಿನ ಅರಿವು ಕಾರ್ಯಗಾರ

ಕಾನೂನಿನ ಅರಿವು ಕಾರ್ಯಗಾರ

Monday, November 26th, 2018

ಭಾರತೀಯ ಪ್ರಜ್ಞಾವಂತ ನಾಗರಿಕನೆನೆಸಿಕೊಳ್ಳಬೇಕಾದರೆ ಆತನಿಗೆ ಕಾನೂನಿನ ಅರಿವು ಅಗತ್ಯ. ಸಂವಿಧಾನವು ನಮಗೆ ಸ್ವಾತಂತ್ರ್ಯ ನೀಡಿದ್ದರೂ ಮತ್ತೊಬ್ಬರಿಗೆ ಪ್ರಹಾರವಿಕ್ಕದೇ ಭಾರತೀಯ ಸಂವಿಧಾನದಲ್ಲಿ ಕಾನೂನನ್ನು ತಿಳಿದುಕೊಂಡು ದೇಶಕ್ಕೆ ಕೊಡುಗೆ ನೀಡುವವರಾಗಬೇಕು ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ ಡಾ|ಬಿ.ಕೆ ರವೀಂದ್ರರವರು ಹೆಳಿದರು.

Read More

ವಿಜ್ಞಾನ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ವಿಜ್ಞಾನ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Monday, November 19th, 2018

ಪುತ್ತೂರಿನ ವಿವೇಕಾನಂದ ಕಾಲೇಜಿನ ಆಶ್ರಯದಲ್ಲಿ ನಡೆದ ವಿಜ್ಞಾನ ವಿಭಾಗ ೨೦೧೮-೧೯ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ ಛಾಂಪಿಯನ್ ಆಗಿ ಮೂಡಿ ಬಂದಿದೆ

Read More

ಟ್ಯಾಲೆಂಟ್ಸ್ ಡೇ - ಸಾಂಸ್ಕೃತಿಕ ಸ್ಪರ್ಧೆ

ಟ್ಯಾಲೆಂಟ್ಸ್ ಡೇ – ಸಾಂಸ್ಕೃತಿಕ ಸ್ಪರ್ಧೆ

Tuesday, November 13th, 2018

ಪ್ರತಿಯೋರ್ವ ವ್ಯಕ್ತಿಗೂ ಭಗವಂತ ಪ್ರತಿಭೆಯನ್ನು ಕರುಣಿಸಿರುತ್ತಾನೆ. ಆದರೆ ಭಗವಂತ ನೀಡಿದ ಪ್ರತಿಭೆಯನ್ನು ಅನಾವರಣಗೊಳಿಸುವುದು ವ್ಯಕ್ತಿಯ ಕರ್ತವ್ಯವಾಗಿದೆ.ಆದ್ದರಿಂದ ನಮ್ಮೊಳಗಿನ ಪ್ರತಿಭೆ ಬೆಳಕಿಗೆ ಬರಬೇಕಾದರೆ ನಮ್ಮಲ್ಲಿ ಮೊದಲು ಆಸಕ್ತಿ ಮತ್ತು ಅಭಿರುಚಿಯನ್ನು ಮೈಗೂಡಿಸಿಕೊಂಡಾಗ ಯಶಸ್ವಿ ಜೊತೆಗೆ ಬದುಕು ಕೂಡ ಹಸನಾಗಬಲ್ಲುದು ಎಂದು ಜ್ಯೂನಿಯರ್ ಶಂಕರ್ ಜಾದು ಜಗತ್ತಿನ ಗಿಲಿಗಿಲಿ ಮ್ಯಾಜಿಕ್ ಖ್ಯಾತಿಯ ತೇಜಸ್ವಿಯವರು ಹೇಳಿದರು.

Read More

ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟ

ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟ

Monday, November 12th, 2018

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂದಬಿದ್ರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿಗೆ ಒಟ್ಟು 11 ಪದಕಗಳು ಲಭಿಸಿದ್ದು ಬಾಲಕರ ವಿಭಾಗದಲ್ಲಿ ರನ್ನರ್ ಆಫ್ ಪ್ರಶಸ್ತಿ ಪಡೆದುಕೊಂಡರೆ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪದೆದುಕೊಂಡಿರುತ್ತಾರೆ, ಈ ಕೂಟದಲ್ಲಿ ತ್ರಿವಿಧ ಜಿಗಿತ ಮತ್ತು ಉದ್ದ ಜಿಗಿತದಲಿಲ್ ಚಿನ್ನದ ಪದಕಗಳನ್ನು ಕೊರಳಿಗೇರಿಸಿದ ಫಿಲೋಮಿನಾದ ಪ್ರೀತಮ್ ರೈ ಅವರಿಗೆ ವೈಯಕ್ತಿಕ ಪ್ರಶಸ್ತಿ ಲಭಿಸಿದೆ.

Read More