ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು – ಗಾಂಧಿಜಯಂತಿ ಆಚರಣೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ರೋವರ್ಸ್ -ರೇಂಜರ್ಸ್ ಘಟಕ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜಿನ ರೋವರ್ಸ್ -ರೇಂಜರ್ಸ್ ಘಟಕದ ಆಶ್ರಯದಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾಲೇಜಿನ ಆವರಣದ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು. ಘಟಕದ ಎಲ್ಲಾ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ರೋವರ್ಸ್ ಘಟಕದ ಮುಖ್ಯಸ್ಥರು, ಉಪನ್ಯಾಸಕರಾದ ಶರತ್ ಆಳ್ವಾ ಗಾಂಧೀಜಿಯ ಮಹತ್ವವನ್ನು ತಿಳಿಸಿದರು. ಉಪನ್ಯಾಸಕರಾದ ಸಂದೇಶ್ ಜೇನ್ ಲೋಬೋ, ರೇಂಜರ್ಸ್ ಘಟಕದ ಮುಖ್ಯಸ್ಥರಾದ ಪೂರ್ಣಿಮಾ, ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.