ನ.12: ವಾರ್ಷಿಕ ಕ್ರೀಡಾಕೂಟ

ದರ್ಭೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನ.12 ರಂದು ಕಾಲೇಜಿನ‌ ಐತಿಹಾಸಿಕ ಕ್ರೀಡಾಂಗಣದಲ್ಲಿ ಜರಗಲಿದೆ. ಮುಖ್ಯ ಅತಿಥಿಯಾಗಿ ಪುತ್ತೂರು ಸಿಟಿ ಆಸ್ಪತ್ರೆಯ ಯೂರಾಲಜಿಸ್ಟ್ ಡಾ.ದೀಪಕ್ ರೈಯವರು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ವಂ.ಆಲ್ಫ್ರೆಡ್ ಜಾನ್ ಪಿಂಟೋರವರು ವಹಿಸಲಿದ್ದಾರೆ.  ಗೌರವ ಅತಿಥಿಗಳಾಗಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ನ ಉಪಾಧ್ಯಕ್ಷ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ನವನೀತ್ ಬಜಾಜ್, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಿಯೋ ನೊರೋನ್ಹಾ, ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ಇನ್-ಚಾರ್ಜ್ ವಂ.ಡಾ.ಆಂಟನಿ ಪ್ರಕಾಶ್ ಮೊಂತೆರೋ, ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಕ್ಷಕಬಿಕ್ಷಕ ಸಂಘದ ಉಪಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ವಂ.ವಿಜಯ್ ಲೋಬೋ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ಡಿ’ಸೋಜ, ರಾಜೇಶ್ ಮೂಲ್ಯ, ವಿದ್ಯಾರ್ಥಿ ಕ್ರೀಡಾ ಕಾರ್ಯದರ್ಶಿ ವಿನೀತ್ ಜಿ.ಅರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.