ರಾಜ್ಯ ಮಟ್ಟದ ಅತ್ಲೆಟಿಕ್ ಚಾಂಪಿಯನ್‍ಶಿಪ್‍


 
ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಜೂನಿಯರ್ ಅತ್ಲೆಟಿಕ್ ಚಾಂಪಿಯನ್‍ಶಿಪ್ 2019 ಕ್ರೀಡಾಕೂಟದಲ್ಲಿ ಸಂತಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

18 ವರ್ಷದ ಒಳಗಿನ ಬಾಲಕರ ವಿಭಾಗದ ತ್ರಿವಿಧ ಜಿಗಿತದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಭವಿತ್ ತೃತೀಯ ಸ್ಥಾನವನ್ನು, 18 ವರ್ಷದ ಒಳಗಿನ ಬಾಲಕಿಯರ ವಿಭಾಗದ 5 ಕಿ. ಮೀ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ರಕ್ಷಾ ಅಂಚನ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ಕಾಳೇಜಿನ ಪ್ರಾಂಶುಪಾಲರಾದ ವಂ. ವಿಜಯ್ ಲೋಬೊ , ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿ’ಸೋಜ ಹಾಗೂ ರಾಜೇಶ್ ಮೂಲ್ಯ ತಿಳಿಸಿದ್ದಾರೆ.