ಪ್ಲಾಸ್ಟಿಕ್ ಮಾಲಿನ್ಯದ ನಿರ್ಮೂಲನೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೀಜು ಹಾಗೂ ವಿಜ್ಞಾನ ಸಂಘದ ವತಿಯಿಂದ ಜೂನ್ 12 ರಂದು ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಬಗ್ಗೆ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಎಸ್.ಜೆ.ಎಂ. ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಶಾಂತ್ ಭಟ್ ಮಾತನಾಡುತ್ತಾ ಪ್ಲಾಸ್ಟಿಕ್ ಮಾಲಿನ್ಯದಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ. ಕುಡಿಯುವ ನೀರು ಕಲುಷಿತಗೊಳ್ಳುತ್ತಿದ್ದು, ಪರಿಸರವು ಸಮತೋಲನ ತಪ್ಪುತ್ತಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದ ಮನುಷ್ಯನ ಆರೋಗ್ಯಕ್ಕೆ, ಸಸ್ಯ, ಪ್ರಾಣಿ, ಪಕ್ಷಿ ಸಂಕುಲ, ಜಲಚರಗಳಿಗೂ ಧಕ್ಕೆ ಉಂಟಾಗುತ್ತಿದೆ. ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟಲು ಬಿದಿರಿನ ಪಾತ್ರೆಗಳು, ಅಡಿಕೆ ಹಾಳೆಗಳನ್ನು ಉಪಯೋಗಿಸಿ ಜನಜಾಗೃತಿ ಮೂಡಿಸುವ ಅನಿವಾರ‍್ಯತೆ ನಮ್ಮ ಮುಂದೆ ಇದೆ ಎಂದು ಹೇಳಿದರು. ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಆಗುವ ಹಾನಿಯ ಬಗ್ಗೆ ಹಲವಾರು ಮಾಹಿತಿಗಳನ್ನು ಹಾಗೂ ಜಾಗೃತಿಯನ್ನು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ|ಫಾ| ವಿಜಯ್ ಲೋಬೊ ಮಾತನಾಡಿ, ಭಾರತದಲ್ಲಿ ಪ್ರತಿ ದಿನ ಸುಮಾರು 16000 ಟನ್‌ಗಳಷ್ಟು ಪ್ಲಾಸ್ಟಿಕ್ ಅನ್ನು ಬಳಸುತ್ತೇವೆ. ಈಗಾಗಲೇ ನಮ್ಮ ದೇಶದಲ್ಲಿ 25 ರಾಜ್ಯಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಆಗಿದ್ದರೂ, ಇನ್ನೂ ಕೆಲವು ಕಡೆಗಳಲ್ಲಿ ಜಾರಿಗೆ ಬಂದಿಲ್ಲ. 2020-2022 ರಷ್ಟು ಹೊತ್ತಿಗೆ ಭಾರತದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿರ್ಮೂಲನೆ ಆಗುವ ಸಾಧ್ಯತೆಗಳಿವೆ. ಹೆಚ್ಚು ಬಟ್ಟೆಯ ಚೀಲಗಳನ್ನು ಬಳಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು. ವಿಜ್ಞಾನ ಸಂಘದ ಸಂಯೋಜಕರಾದ ಉಪನ್ಯಾಸಕರಾದ ರವಿಪ್ರಸಾದ ಬಿ.ಜಿ, ಶ್ರೀಮತಿ ಉಷಾ, ಶ್ರೀಮತಿ ಜಯಲಕ್ಶ್ಮೀ ಹಾಗೂ ವಿಜ್ಞಾನ ಸಂಘದ ಅಧ್ಯಕ್ಷ ಅಶ್ವಿನಿ ಕಾರ್ಯದರ್ಶಿ ಕುಮಾರಿ ಸಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಚಿತ್ರಾ ಬಳಗ ಪ್ರಾರ್ಥಿಸಿ, ಅಶ್ವಿನಿ ಸ್ವಾಗತಿಸಿ, ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.