ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ-2018

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯಕ ಮತ್ತು ಸಾಂಸ್ಕೃತಿಕಚಟುವಟಿಕೆಗಳ ಸ್ಪರ್ಧೆ-2018 ಇದರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿಗಳು ಸಂಘಟಕೆರು ಸಂಘಟಿಸಿದ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜ್‍ನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಹರಿ ಆಚಾರ್ಯರವರು ಜಾನಪದ ಗೀತೆ ಹಾಗೂ ಭಾವಗೀತೆಯಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಶ್ರೀದೇವಿ ಕೆ.ರವರು ಆಶುಭಾಷಣದಲ್ಲಿ ಪ್ರಥಮ, ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರಥಮ ವಾಣಿಜ್ಯ ವಿಭಾಗದ ರಿತೇಶ್ ರೈಯವರು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರಥಮ ವಾಣಿಜ್ಯ ವಿಭಾಗದ ಅನುಶ್ರೀರವರು ಜಾನಪದ ಗೀತೆಯಲ್ಲಿ ತೃತೀಯ ಸ್ಥಾನ, ಪ್ರಥಮ ವಿಜ್ಞಾನ ವಿಭಾಗದ ಬೆವನ್ ಮ್ಯಾಥ್ಯೂರವರು ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಕಾಲೇಜ್‍ನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ ಹಾಗೂ ಪ್ರದರ್ಶನ ವಿಭಾಗದ ಸಂಯೋಜಕರಾದ ಸುಮನಾ ಪ್ರಶಾಂತ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಡವಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜ್‍ನಲ್ಲಿ ನ.30ಕ್ಕೆ ನಡೆಯಲಿರುವ ಮೈಸೂರು ವಿಭಾಗೀಯ ಮಟ್ಟಕ್ಕೆ ಲಹರಿ ಆಚಾರ್ಯ, ಶ್ರೀದೇವಿ ಕೆ ಹಾಗೂ ರಿತೇಶ್ ರೈಯವರು ಆಯ್ಕೆಯಾಗಿದ್ದಾರೆ.