ಸೈಬರ್ ಅಪರಾಧ ವಿರುದ್ದ ಜಾಗೃತಿ ಕಾರ್ಯಕ್ರಮ

ಬದಲಾದ ನಮ್ಮ ಜೀವನ ಶೈಲಿಯಿಂದಾಗಿ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದ್ದು ಹೊಸ ಹೊಸ ರೀತಿಯ ಸಂವಹನ ವ್ಯವಸ್ಥೆಗಳು ಬಳಕೆಯಾಗುತ್ತಿದ್ದು ಹೆಚ್ಚಾಗಿ ಇದರ ಅಕ್ರಮ ಬಳಕೆ ನಡೆಯುತ್ತಿದೆ. ಇದನ್ನು ತಡೆಯುವ ಜಾಗೃತಿ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಬೇಕಾಗಿದೆ. ವಿದ್ಯಾರ್ಥಿಗಳು ಸೈಬರ್ ಪ್ರಕರಣದ ವಿರುದ್ದ ಜಾಗೃತರಾಗಬೇಕಾಗಿದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಕೆ. ನಾಗರಾಜ್ ಹೇಳಿದರು.

ಜi..26ರಂದು ಸಂತ ಫಿಲೋಮಿನಾ ಪಿ.ಯು ಕಾಲೇಜಿನ ಕಂಪ್ಯೂಟರ್ ಕ್ಲಬ್ ವತಿಯಿಂದ ಆಯೋಜನೆಗೊಂಡ “ಸೈಬರ್ ಅಪರಾಧ ವಿರುದ್ದ ಜಾಗೃತಿ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ರೆ.ಫಾ ವಿಜಯ್ ಲೋಬೊ ಪ್ರಾಸ್ತಾವಿಕ ಮಾತುಗಳನ್ನಾಡಿ ಆಧುನಿಕರಣದಲ್ಲಿ ಸೈಬರ್ ಪ್ರಕರಣಗಳಂತಹ ಎಷ್ಟೋ ಮೋಸದ ಜಾಲಗಳು ನಡೆಯುತ್ತಿದೆ. ಇದನ್ನು ಮಟ್ಟ ಹಾಕಲು ಜಾಗೃತಿ ಕಾರ್ಯಕ್ರಮಗಳು ನಡೆಯಬೇಕಾಗಿದೆ. ಸಾಮಾಜಿಕ ಸಮಸ್ಯೆಗಳಲ್ಲಿ ಸೈಬರ್ ಪ್ರಕರಣವೂ ಒಂದು ಇದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು. ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕ, ಕಂಪ್ಯೂಟರ್ ಕ್ಲಬ್ ಸಂಯೋಜಕ ಅನಿಲ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿ ತೃಪ್ತಿ ಕಾರ್ಯಕ್ರಮ ನಿರೂಪಿಸಿ, ಸರೋಷ್ ಸ್ವಾಗತಿಸಿ, ವಿದ್ಯಾರ್ಥಿ ಕಶ್ಯಪ್ ವಂದಿಸಿದರು.