ಜಿಲ್ಲಾ ಮಟ್ಟದ ಸಾ೦ಸ್ಕೃತಿಕ, ಸಾಹಿತ್ಯಕ ಸ್ಪರ್ಧೆ : ಫಿಲೋಮಿನಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಜಿರೆ ಎಸ್‍ಡಿಎಂ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾ೦ಸ್ಕೃತಿಕ ಮತ್ತು ಸಾಹಿತ್ಯಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅಮೃತಾ ಎಸ್.ವಿಯವರು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನವನ್ನು, ಮಹಮ್ಮದ್ ಶಾಹಿರ್ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪ್ರಥಮ ವಾಣಿಜ್ಯ ವಿಭಾಗದ S.ಸಮೃಧ್ದಿ ಶೆಣೈರವರು ಜಾನಪದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು, ದ್ವಿತೀಯ ವಿಜ್ಞಾನ ವಿಭಾಗದ ಬೆವನ್ ಮ್ಯಾಥ್ಯೂ ಹಾಗೂ ಲಕ್ಷೀತ್ ಪಿ.ಸಿರವರು ರಸಪ್ರಸ್ನೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ ಹಾಗೂ ಪ್ರದರ್ಶನ ಕಲಾ ಸಂಘದ ನಿರ್ದೇಶಕಿಯರಾದ ಸುಮನಾ ಪ್ರಶಾಂತ್, ರಶ್ಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.