‘ಇ ಸಂಪನ್ಮೂಲಗಳು’ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮ

ಶಿಕ್ಷಕರು ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಜೊತೆಗೆ ಅವರಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಾರ್ಗದರ್ಶಕರಾಗಿರಬೇಕು ಎಂದು ಮೈಸೂರು SDMIMDಯ ಗ್ರಂಥಪಾಲಕರಾದ ಡಾ| ಸುನಿಲ್ ಎಂ.ವಿ. ಹೇಳಿದರು.

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ಕ್ಲಬ್‍ನ ಆಶ್ರಯದಲ್ಲಿ ಸೆ. 29 ರಂದು ನಡೆದ ‘ಇ ಸಂಪನ್ಮೂಲಗಳು’ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಶಿಕ್ಷಕರು ವಿದ್ಯಾರ್ಥಿಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಪ್ರತಿ ಹಂತದಲ್ಲೂ ವಿದ್ಯಾರ್ಥಿಗಳನ್ನು ಬೆಂಬಲಿಸುವುದರ ಜೊತೆಗೆ ಅವರಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರತಿಯೊಬ್ಬರು ಕಲಿಕಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಮ್ದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ವಿಜಯ್ ಲೋಬೊ ಮಾತನಾಡಿ ಶಿಕ್ಷಕರು ಇಂದಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಕಲಿಕೆ ಒಂದು ನಿರಂತರ ಪ್ರಕ್ರೀಯೆಯಾಗಿದ್ದು ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕು ಎಂದರು. ಕಂಪ್ಯೂಟರ್ ಕ್ಲಬ್‍ನ ಸಂಯೋಜಕರಾದ ಅನಿಲ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಸುಮನಾ ಪ್ರಶಾಮ್ತ್ ಪ್ರಾರ್ಥಿಸಿ, ಕಾರ್ಯಕ್ರಮದ ಸಂಯೋಜಕರಾದ ಅನಿಲ್ಕುಮಾರ್ ಸ್ವಾಗತಿಸಿ, ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಹರ್ಷದ ಇಸ್ಮಾಯಿಲ್ ವಂದಿಸಿದರು. ವಾಣಿಜ್ಯ ವಿಭಾಗದ ಸಂತೋಷ್ ಡಿ’ಸೋಜ ನಿರೂಪಿಸಿದರು.