ತಾ| ಮಟ್ಟದ ಪ.ಪೂ ಕಾಲೇಜುಗಳ ಫುಟ್‍ಬಾಲ್ ಪಂದ್ಯಾಟ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಫಿಲೋಮಿನಾ ಕಾಲೇಜಿನ ಹಾಕಿ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್‍ಬಾಲ್ ಪಂದ್ಯಾಟ ನಡೆಯಿತು.

ಫೈನಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದಿದ್ದು, ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸೆ.13 ರಂದು ಮಂಗಳೂರಿನ ಯೆನಪೋಯ ವಿದ್ಯಾಸಂಸ್ಥೆಯಲ್ಲಿ ಜರಗುವ ಜಿಲ್ಲಾ ಮಟ್ಟದ ಫುಟ್‍ಬಾಲ್ ಪಂದ್ಯಾಟಕ್ಕೆ ವಿಜಯಿ ಫಿಲೋಮಿನಾ ಕಾಲೇಜು ತಂಡ ಅರ್ಹತೆ ಪಡೆದಿದೆ. ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ವಿಜಯ್ ಲೋಬೋರವರು ವಿಜೇತರಿಗೆ ಬಹುಮಾನ ವಿತರಿಸಿದರು. ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿ’ಸೋಜ ಹಾಗೂ ರಾಜೇಶ್ ಮೂಲ್ಯರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.