ಮೇ.20: ಪಿಯು ಪ್ರಥಮ ತರಗತಿ ಪ್ರಾರಂಭೋತ್ಸವ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವವು ಮೇ.20ರಂದು ಕಾಲೇಜ್‍ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ಜರಗಲಿದೆ.

ಕಾಲೇಜ್‍ನ ಸಂಚಾಲಕರಾದ ವಂ|ಆಲ್ಫ್ರೆಡ್ ಜಾನ್ ಪಿಂಟೋರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜ್‍ನ ಕ್ಯಾಂಪಸ್ ನಿರ್ದೇಶಕ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ|ಡಾ|ಆ್ಯಂಟನಿ ಪ್ರಕಾಶ್ ಮೊಂತೇರೋ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ನ್ಯಾಯವಾದಿ ದುರ್ಗಾಪ್ರಸಾದ್ ರೈ, ಕಾಲೇಜ್‍ನ ವಸತಿ ನಿಲಯದ ವಾರ್ಡನ್‍ಗಳಾದ ವಂ|ರಿತೇಶ್ ರೊಡ್ರಿಗಸ್, ವಂ|ಸುನಿಲ್ ಜಾರ್ಜ್ ಡಿ’ಸೋಜ, ಸಿಸ್ಟರ್ ಫ್ಲೋರಾ ಮಚಾದೋರವರು ವೇದಿಕೆಯಲ್ಲಿ ಉಪಸ್ಥಿತಲಿರುವರು. ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಾಲೇಜ್‍ನ ಸಾಧನೆ ಮತ್ತು ನಿಯಮಾವಳಿಗಳ ಬಗ್ಗೆ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ಮಾಹಿತಿಯನ್ನು ನೀಡಲಿದ್ದಾರೆ ಎಂದು ಕಾಲೇಜ್‍ನ ಪ್ರಕಟಣೆ ತಿಳಿಸಿದೆ.