ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು : ದ್ವಿತೀಯ ಪಿ.ಯು.ಸಿ ಪ್ರಾರಂಭೋತ್ಸವ

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ನಡತೆ, ಶಿಸ್ತನ್ನು ಅಳವಡಿಸಿಕೊಂಡಾಗ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ ಸ್ಟ್ಯಾನಿ ಪಿಂಟೋ ಹೇಳಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2023-24ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಭಾಷೆಯಲ್ಲಿ ಗುರುಗಳಾಗಬೇಕು. ಕಷ್ಟಪಟ್ಟು ಕೆಲಸ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಮತ್ತು ಸಾಮರ್ಥ್ಯದ ಮೂಲಕ ತಮ್ಮ ಪ್ರತಿಭೆಯನ್ನು ಹೊರಹಾಕಲು ಸೂಕ್ತ ವೇದಿಕೆ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹರ‍್ಯೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅವರು ಮಾತನಾಡಿ, ಬಲವಾದ ಬಯಕೆ ಮತ್ತು ಕಠಿಣ ಪರಿಶ್ರಮವು ಯಶಸ್ಸಿಗೆ ಕಾರಣವಾಗುತ್ತದೆ.

ಉತ್ತಮವಾದ ಗುರಿಯುವಿದ್ಯಾರ್ಥಿಯ ಭವಿಷ್ಯಕ್ಕೆ ಯಶಸ್ಸನ್ನು ತಂದು ಕೊಡುತ್ತದೆ. ವರ್ಷದ ಅರಂಭದಿoಧಲೆ ಉತ್ತಮ ಗುಣಗಳನ್ನು ಮೈಗೂಡಿಕೊಂಡು, ಅಧ್ಯಯನದ ಕಡೆಗೆ ಒಲವನ್ನು ತೋರಿಸಿದರೆ ಉತ್ತಮ ವ್ಯಕ್ತಿತ್ವವನ್ನು ರೂಢಿಸಿಕೊಂಡು ಬದುಕಲು ಸಾಧ್ಯ ಎಂದು ಹೇಳುತ್ತಾ ಕಾಲೇಜಿನ ನಿಯಮ ಮತ್ತು ನಿರ್ಬಂಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾಲೇಜಿನ ಎಲ್ಲಾ ಭೋದಕ ಮತ್ತು ಭೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಶಾಂತ್ ಭಟ್ ಕಾರ್ಯಕ್ರಮ ನಿರೂಪಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರಿಮತಿ ಫಿಲೋಮಿನಾ ಮೊಂತೇರೊ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಭರತ್ ಕುಮಾರ್ ವಂದಿಸಿದರು.