ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಕೆ-ಸೆಟ್ ನಲ್ಲಿ ತೇರ್ಗಡೆ

Joshila Menezes

ಪುತ್ತೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿಯಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ನಡೆಸಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯಲ್ಲಿ ಪುತ್ತೂರಿನ ಸಂತ ಫಿಲೋಮಿನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರುಗಳಾದ ಸಂತೋಷ್ ಕ್ಲಾರೆನ್ಸ್ ಡಿ’ ಸೋಜಾ ಹಾಗೂ ಜೊಶೀಲ ಮರಿಟ ಮಿನೇಜಸ್ ಇವರು ತೇರ್ಗಡೆ ಹೊಂದಿರುತ್ತಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.