‘ಪ್ರತಿಭಾ 2018’ ಕಾರ್ಯಕ್ರಮ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯಾದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಸಿಸಲಾದ ಜಿಲ್ಲಾಮಟ್ಟದ ಅಂತರ್‍ಶಾಲಾ ಸ್ಪರ್ಧೆ ‘ಪ್ರತಿಭಾ 2018’ ಕಾರ್ಯಕ್ರಮವು ಸಪ್ಟೆಂಬರ್ 7 ನೇ ತಾರೀಖಿನಂದು ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೇಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಜಿ.ಎಲ್. ಆಚಾರ್ಯ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಬಲರಾಮ ಆಚಾರ್ಯ ಹಾಗೂ ಗೌರವ ಉಪಸ್ಥಿಯನ್ನು ಕಾಲೇಜಿನ ಕ್ಯಾಂಪಸ್ ನಿರ್ದೇಶಕರು ಹಾಗೂ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಲಿಯೊ ನೊರೊನ್ಹಾ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.