ಪರಿಸರ ಜನಜಾಗೃತಿ ಜಾಥಾ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಜ್ರ ಮಹೋತ್ಸವದ ಅಂಗವಾಗಿ ನ.1 ರಂದು ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳಿಂದ ಪರಿಸರ ಜನಜಾಗೃತಿ ಜಾಥಾವು ನಡೆಯಿತು. ಸುಮಾರು 1000 ವಿದ್ಯಾರ್ಥಿಗಳು ಭಾಗವಹಿಸಿದ ಜಾಥಾದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ. ವಿಜಯ್ ಲೋಬೊ ಅವರು ಜಾಥಾವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜು ಕ್ರೀಡಾಂಗಣದಲ್ಲಿ ಪ್ರಾರಂಭಗೊಂಡ ಈ ಜಾಥವು ಪರ್ಲಡ್ಕ ಮುಖೇನ ಸಾಗಿ ಬಸ್ ನಿಲ್ದಾಣದ ಮೂಲಕ ಮತ್ತೆ ಕಾಲೇಜು ಕ್ರೀಡಾಂಗಣಾದಲ್ಲಿ ಕೊನೆಗೊಂಡಿತು.

ಕಾಲೇಜಿನ ಉಪನ್ಯಾಸಕ ವೃಂದದವರು ಜಾಥಾದಲ್ಲಿ ಪಾಲ್ಗೊಂಡರು. ಬಳಿಕ ನಡೆದ ಸಮಾರೋಪ ಕಾರ್ಯಕ್ರಮದಲ್ಲಿಪುತ್ತೂರಿನ ಸಂತ ಫಿಲೋಮಿನಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಆದ ಲೂಯಿಸ್ ಮಸ್ಕರೇನ್ಹಸ್, ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ರವಿರಾಜ್ ಕೆ, ಅಶೋಕ್ ಕುಮಾರ್, ಸಂತ ಫಿಲೋಮಿನಾ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಪ್ರಾಧ್ಯಪಕ ವಂ. ಫಾ| ರಿತೇಶ್ ರೊಡ್ರಿಗಸ್, ವಂ.ಫಾ|ಸುನಿಲ್ ಜಾರ್ಜ್ ಡಿಸೋಜ, ಹಿರಿಯ ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಜಯರಾಜ್ ಭಂಡಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ದುರ್ಗಾಪ್ರಸಾದ್ ರೈ, ಕಾಲೇಜಿನ ದೈಹಿಕ ಶಿಕ್ಷಕರಾದ ಪ್ರಕಾಶ್ ಡಿಸೋಜ, ರಾಜೇಶ್ ಮೂಲ್ಯ, ಕಾಲೇಜಿನ ಪ್ರಾಂಶುಪಾಲರಾದ ವಂ. ವಿಜಯ್ ಲೋಬೊ ಹಾಗೂ ಸಂಯೋಜಕಿ ದಿವ್ಯಾ ಕೆ ಉಪಸ್ಥಿತರಿದ್ದರು. ಪ್ರದರ್ಶನ ಕಲಾ ವಿಭಾಗದ ವಿದ್ಯಾರ್ಥಿಗಳು ನಾಡಗೀತಿಯನ್ನು ಹಾಡಿದರು . ಕಾಲೇಜಿನ ಪ್ರಾಂಶುಪಾಲರಾದ ವಂ. ವಿಜಯ್ ಲೋಬೊ ಸ್ವಾಗತಿಸಿದರು. ಸಂಯೋಜಕಿ ದಿವ್ಯಾ ಕೆ ವಮ್ದಿಸಿದರು. ಉಪನ್ಯಾಸಕಿ ಉಷಾ ಯಶವಂತ್ ಕಾರ್ಯಕ್ರಮ ನಿರೂಪಿಸಿದರು.