ವಿಜ್ಞಾನ ಮಾದರಿ ಸ್ಪರ್ಧೆ

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್‌ರವರು ನ.11 ರಂದು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಜ್ಞಾನ ಮಾದರಿ ಸ್ಪರ್ಧೆ ‘ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2017’ ಇದರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ದ್ವಿತೀಯ ಬಹುಮಾನ ಪಡೆದಿದೆ.

ಕಾಲೇಜ್‌ನಿಂದ ಒಟ್ಟು 8 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಇದರಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿಲಿಯಂ ಸಂತೋಷ್, ಸನತ್ ಎಂ.ನಾಯಕ್, ಪ್ರಥಮ ವಿಜ್ಞಾನ ವಿಭಾಗದ ಅನ್‌ಮೋಲ್ ಎನ್, ಲಿನ್ಸಿ ತೋಮಸ್, ಡೆಲ್ಮಾ ಲೋರಾ ಡಿ’ಕುನ್ಹರವರ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. ಕಾಲೇಜ್‌ನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ರೋಹಿತ್ ಕುಮಾರ್ ಟಿ.ರವರು ತಂಡದ ನೇತೃತ್ವ ವಹಿಸಿದ್ದರು.