ಬಾಹ್ಯಾಕಾಶ ವಿಜ್ಞಾನದ ಕುರಿತು ಸಂವಾದ ಕಾರ್ಯಕ್ರಮ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‌ನ ವಿಜ್ಞಾನ ವೇದಿಕೆಯ ಆಶ್ರಯದಲ್ಲಿ ಬಾಹ್ಯಾಕಾಶ ವಿಜ್ಞಾನದ ಕುರಿತು ಇಸ್ರೋದೊಂದಿಗೆ ಸಂವಾದ ಕಾರ್ಯಕ್ರಮವು ಆ.8 ರಂದು ಪೂರ್ವಾಹ್ನ ಕಾಲೇಜ್‌ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಇಸ್ರೋ ಎಂ.ಸಿ.ಎಫ್ ಹಾಸನ ಇಲ್ಲಿನ ಉಪವ್ಯವಸ್ಥಾಪಕರಾದ ಬಿ.ಯಸೊಬ್‌ರವರು ಭಾಗವಹಿಸಲಿದ್ದಾರೆ. ಫಿಲೋಮಿನಾ ಕಾಲೇಜ್‌ನ ಕ್ಯಾಂಪಸ್ ನಿರ್ದೇಶಕರಾದ ವಂ|ಆಂಟನಿ ಪ್ರಕಾಶ್ ಮೊಂತೇರೋರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾಲೇಜ್‌ನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.