ವಿದ್ಯಾರ್ಥಿ ಸಂಘ ಉದ್ಘಾಟನೆ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಜೂ.15 ರಂದು ಬೆಳಿಗ್ಗೆ ಕಾಲೇಜ್‍ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ಪ್ರೀತಂ ಫಿಲಿಪ್ ತಾವ್ರೋರವರು ನೂತನ ವಿದ್ಯಾರ್ಥಿ ಸಂಘವನ್ನು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜ್‍ನ ಕ್ಯಾಂಪಸ್ ಡೈರೆಕ್ಟರ್ ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥ ವಂ|ಡಾ|ಆ್ಯಂಟನಿ ಪ್ರಕಾಶ್ ಮೊಂತೇರೋ, ಗೌರವ ಅತಿಥಿಯಾಗಿ ಫಿಲೋಮಿನಾ ಪದವಿ ಕಾಲೇಜ್‍ನ ಪ್ರಾಂಶುಪಾಲರಾದ ಪ್ರೊ|ಲಿಯೋ ನೊರೋನ್ಹಾರವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜ್‍ನ ಸಂಚಾಲಕರಾದ ವಂ|ಆಲ್ಫ್ರೆಡ್ ಜಾನ್ ಪಿಂಟೋರವರು ವಹಿಸಲಿದ್ದಾರೆ ಎಂದು ಕಾಲೇಜ್‍ನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ