ಟೇಬಲ್ ಟೆನ್ನಿಸ್ ಪಂದ್ಯಾಟ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಬಾಲಕ ಹಾಗೂ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟವು ಫಿಲೋಮಿನಾ ಕಾಲೇಜ್‍ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಿತು.

ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಚಾಂಪಿಯನ್ ಎನಿಸಿಕೊಂಡಿತು. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ರನ್ನರ್ಸ್ ಪ್ರಶಸ್ತಿ ಪಡೆದರೆ, ಬಾಲಕರ ವಿಭಾಗದಲ್ಲಿ ವಿವೇಕಾಂದ ಪದವಿ ಪೂರ್ವ ಕಾಲೇಜು ಚಾಂಪಿಯನ್ ಎನಿಸಿಕೊಂಡಿತು. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ರನ್ನರ್ಸ್ ಪ್ರಶಸ್ತಿಗೆ ತೃಪ್ತಿ ಪಡೆದುಕೊಂಡಿತು.

ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರೀಡೆಗಳು ದೈಹಿಕ ಸಾಮಾಥ್ರ್ಯವನ್ನು ವೃದ್ಧಿಪಡಿಸುತ್ತದೆ. ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಆರೋಗ್ಯವೂ ಉತ್ತಮಗೊಳ್ಳುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ಕಲಿಕಾ ಸಂದರ್ಭದಲ್ಲಿ ಓದಿನ ಜೊತೆಗೆ ಆಟದ ಕಡೆಗೂ ಗಮನ ಹರಿಸುವುದು ಮಾತ್ರವಲ್ಲ ಸಾಧನೆಯ ಗುರಿಯನ್ನು ಮುಟ್ಟಬಲ್ಲೆ ಎಂಬ ಛಲವನ್ನು ಹೊಂದಿರಬೇಕಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಸೋಲನ್ನು ಸಮಾನವಾಗಿ ಸ್ವೀಕರಿದರೆ ಮಾತ್ರ ಕ್ರೀಡೆಗೆ ಮಹತ್ವ ಬರುವುದು ಎಂದರು.

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್‍ನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ, ವಿವೇಕಾನಂದ ಕಾಲೇಜ್‍ನ ದೈಹಿಕ ಶಿಕ್ಷಣ ನಿರ್ದೇಶಕ ಯತೀಶ್ ಕುಮಾರ್, ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜ್‍ನ ದೈಹಿಕ ಶಿಕ್ಷಣ ನಿರ್ದೇಶಕ ನಂದನ್, ಫಿಲೋಮಿನಾ ಕಾಲೇಜ್‍ನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿ’ಸೋಜ, ರಾಜೇಶ್ ಮೂಲ್ಯರವರು ಉಪಸ್ಥಿತರಿದ್ದರು.