ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು

ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಆರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತೃಷ್ಠ ಮಟ್ಟದ ಶಿಕ್ಷಣವನ್ನು ನೀಡ್ಶುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪ್ರೇರೀತ್ಸಾಹಿಸುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಿಕೊಟ್ಟಿದೆ. ಕಾಲೇಜು ನೀಡುತ್ತಿರುವ ಪ್ರೇರೀತ್ಸಾಹಕ್ಕೆ ಸೂಕ್ತವಾಗಿ ಸ್ಪಂದಿಸುತ್ತಿರುವ ವಿದ್ಯಾರ್ಥಿಗಳು, ಅವಕಾಶಗಳನ್ನು ಅದ್ಭುತವಾಗಿ ಬಳಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆಯನ್ನು ದಾಕಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. 2019 ನೇ ಸಾಲಿನ ದ್ವಿತೀಯ ಪಿಯುಸಿ ಅ೦ತಿಮ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 3 ರ್ಯಾಂಕ್ ಗಳನ್ನು ತನ್ನದಾಗಿಸಿಕೊಂಡ ಸಂಸ್ಥೆಯು ಸಾಂಸ್ಕ್ರತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ವಿದ್ಯಾರ್ಥಿಗಳ ಅಪೂರ್ವವಾದ ಸಾಧನೆಗೆ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.

2019-20 ನೇ ಶೈಕ್ಷಣಿಕ ವರ್ಷ ಕೂಡಾ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಸ್ಮರಣೀಯ ವರ್ಷವಾಗಿ ಮೂಡಿಬರುತ್ತಿದ್ದು ವಿದ್ಯಾರ್ಥಿಗಳ ಕ್ರೀಡಾ ಕ್ಷೇತ್ರದ ಸಾಧನೆ ಕಾಲೇಜು ನೀಡುತ್ತಿರುವ ಪ್ರೇರೀತ್ಸಾಹಕ್ಕೆ ಪೂರಕವೆನ್ನುವಂತಿದೆ. ಸಂಸ್ಥೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟಾಕ್ಕೆ ಆಯ್ಕೆಯಾಗಿದ್ದು ಕಾಲೇಜಿನ ಗರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ನೀಲ್ ಮಸ್ಕರೇನ್ಹಸ್ ಇವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆ ಏರ್ಪಡಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಒಂದು ಕಂಚಿನ ಪದಕದ ಸಾಧನೆಯೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ನೀಲ್ ಮಸ್ಕರೇನ್ಹಸ್‍ರವರು 50ಮೀ. ಬ್ರೆಸ್ಟ್ ಸ್ಟ್ರೋಕ್‍ನಲ್ಲಿ ಚಿನ್ನದ ಪದಕ, 100ಮೀ. ಮತ್ತು 200ಮೀ. ಬ್ರೆಸ್ಟ್ ಸ್ಟ್ರೋಕ್‍ನಲ್ಲಿ ಬೆಳ್ಳಿ ಪದಕ, 4*100ಮೀ ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ ಪದಕ ಹಾಗೂ 4*100ಮೀ ಮೆಡ್ಲೆ ರಿಲೇಯಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ ಮಾತ್ರವಲ್ಲದೆ ಇದೇ ನವೆಂಬರ್ 18ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ರಾಯಚೂರ್ ನಲ್ಲಿ ಜರಗಿದ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಣಮ್ಯ.ಇ ಅವರು ಅತ್ಯುತ್ತಮ ಸಾಧನೆಯನ್ನು ದಾಖಲಿಸುವುದರ ಮೂಲಕ ಸತತ ಎಂಟನೇ ಬಾರಿಗೆ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ.

ಇವರು ಎಸ್.ಜಿ.ಎ¥sóï.ಐ. 2019-20 ನೇಸಾಲಿನ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಯೋಗ ತಂಡ ಪ್ರಶಸ್ತಿ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ ಹಾಗೂ ಅಗಳಿ ರಾಷ್ಟ್ರ ಯೋಗ ಬೆಸ್ಟ್ ಅವಾರ್ಡ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ರಕ್ಷಾ ಅಂಚನ್ ಇವಳು ನಡಿಗೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಹಲ್ವಾರು ಪದಕಗಳನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟಾದ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುವ ಇವರು ಈ ಶೈಕ್ಷಣಿಕ ವರ್ಷದಲ್ಲಿ ಬೆಳ್ಳಿಯ ಪದಕವನ್ನು ಪಡೆಯುವ ಮೂಲಕ ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳು ತಮಗೆ ಲಭಿಸಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ತುಂಬಾ ಸಂತೋಷ ತಂದಿದೆ. ಈ ಸಾಧನೆಯ್ ಇನ್ನಷ್ಟು ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಆಶಿಸುತ್ತೇನೆ.