Welcoming the New Correspondent

ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ವತಿಯಿಂದ ನೂತನ ಸಂಚಾಲಕರಾಗಿ ನೇಮಕವಾಗಿರುವ ರ. ಫಾ. ಲಾರೆನ್ಸ್ ಮಸ್ಕರೇನಸ್ ಅವರನ್ನು ಸ್ವಾಗತಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ವಿಜಯ್ ಲೋಬೋ ಇವರು ಮಾತನಾಡಿ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಇತಿಹಾಸ, ಸಾಧನೆಗಳು ಮತ್ತು ಪ್ರಸ್ತುತ ಸ್ಥಿತಿಗತಿ ಹಾಗೂ ಅಭಿವೃದ್ಧಿಗಳ ಬಗ್ಗೆ ನೂತನ ಸಂಚಾಲಕರಿಗೆ ಪರಿಚಯಿಸಿದರು. ಹಾಗೆಯೇ ನೂತನ ಸಂಚಾಲಕರನ್ನು ಸಭೆಗೆ ಪರಿಚಯಿಸಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಕಾರ್ಯಕ್ರಮದ  ಮುಖ್ಯ ಅತಿಥಿಗಳಾದ ಫಿಲೋಮಿನಾ  ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲೀಯೊ ನೊರೊನ್ಹಾ ಅವರು ಮಾತನಾಡಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳು ಜಂಟಿಯಾಗಿ ಅತ್ಯುತ್ತಮವಾದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ನೂತನ ಸಂಚಾಲಕರು ನೇತೃತ್ವದಲ್ಲಿ ಈ ಕಾರ್ಯವು ಇನ್ನಷ್ಟು ಯಶಸ್ವಿಯಾಗುತ್ತದೆ ಎಂದು ಹಾರೈಸಿದರು. ರೆ. ಫಾ. ಲಾರೆನ್ಸ್ ಮಸ್ಕರೇನಸ್ ಈ ವರೆಗೆ ಸೇವೆ ಸಲ್ಲಿಸಿರುವ ಎಲ್ಲಾ ಕಡೆಗಳಲ್ಲೂ ಬಲವಾದ ಛಾಪನ್ನು ಮೂಡಿಸಿದ್ದು ಇಲ್ಲಿಯೂ ಕೂಡ ನಾವು ಅಂಥದ್ದೇ ಯಶಸ್ಸನ್ನು ನಿರೀಕ್ಷಿಸಬಹುದು ಮತ್ತು ಸಂಪೂರ್ಣವಾದ ಸಹಕಾರವನ್ನು ನೀಡುತ್ತೇವೆ ಎಂದು ಹೇಳಿದರು.

ಇನ್ನೋರ್ವ ಮುಖ್ಯ  ಅತಿಥಿಗಳಾದ ಕಾಲೇಜಿನ ಕ್ಯಾಂಪಸ್ ನಿರ್ದೇಶಕರು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ಮಾತನಾಡಿ ಕಳೆದ 9 ವರ್ಷಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ನೂತನ ಸಂಚಾಲಕರಿಗೆ ಹಲವಾರು ಸವಾಲುಗಳ ಜೊತೆಗೆ ಫಿಲೋಮಿನ ಕ್ಯಾಂಪಸ್ ಅತ್ಯುತ್ತಮವಾದ ಅವಕಾಶಗಳನ್ನು ನೀಡಲಿದ್ದು, ಅವರ ನೇತೃತ್ವದಲ್ಲಿ ಫಿಲೋಮಿನ ವಿದ್ಯಾಸಂಸ್ಥೆಗಳು ಹೊಸ ಮೈಲಿಗಲ್ಲನ್ನು  ಸ್ಥಾಪಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನೂತನ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನ್ಹಸ್ ಅವರು ಮಾತನಾಡುತ್ತಾ ತನಗೆ 

ಪದವಿ ಪೂರ್ವ ಕಾಲೇಜಿನ ವತಿಯಿಂದ ನೀಡಲಾಗಿರುವ ಸ್ವಾಗತಕ್ಕೆ ಹರ್ಷವನ್ನು ವ್ಯಕ್ತಪಡಿಸುತ್ತಾ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಅದ್ಭುತ ಸಾಧನೆ ಮಾಡಿರುವುದಕ್ಕೆ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದವನ್ನು ಅಭಿನಂದಿಸಿದರು.ಈ ವಿದ್ಯಾಸಂಸ್ಥೆಗಳ ಅಭಿವೃದ್ಧಿಯಲ್ಲಿ ಕೇವಲ ಸಂಚಾಲಕರು ಅಥವಾ ಪ್ರಾಂಶುಪಾಲರು ಅಷ್ಟೇ ಮಾಡುವ  ಕಾರ್ಯ ವಲ್ಲದೆ ಎಲ್ಲಾ ಉಪನ್ಯಾಸಕ ರು ಮತ್ತು ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳು ಸಮಾಜಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಉತ್ತಮ ಕೆಲಸಗಳನ್ನು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ಫಿಲೋಮಿನಾ ವಿದ್ಯಾಸಂಸ್ಥೆಗಳು ಅತ್ಯುತ್ತಮವಾಗಿ ಸೇವೆ ಮಾಡುವ ಮೂಲಕ ಸಮಾಜದಲ್ಲಿ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಜವಾಬ್ಧಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.  ಕನ್ನಡ ವಿಭಾಗದ ಉಪನ್ಯಾಸಕಿ ಸುಮನ ಕೆ ಪ್ರಾರ್ಥಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಲವೀನಾ ಸಾಂತುಮಯೋರ್ ಸ್ವಾಗತಿಸಿದರು. ಹಿಂದಿ ವಿಭಾಗದ ಉಪನ್ಯಾಸಕಿ ಡಾ. ಆಶಾ ಸಾವಿತ್ರಿ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸಂತೋಷ್ ಡಿಸೋಜರವರು ಕಾರ್ಯಕ್ರಮವನ್ನು ನಿರೂಪಿಸಿದರು.